ಪತಿಯ ಅಗಲಿಕೆಯಿಂದ ತುಂಬಲಾರದ ನಷ್ಟ: ಕಿರಣ್ ಮಜುಂದಾರ್ ಶಾ
ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.

ಬೆಂಗಳೂರು: ತನ್ನ ಪತಿಯ ನಿಧನದಿಂದ ತುಂಬಲಾರದ ನಷ್ಟವಾಗಿರುವುದಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ. ಬಯೋಕಾನ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಜಾನ್ ಷಾ, ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ನಿಧನರಾದರು.
' ನನ್ನ ಪತಿ, ಮಾರ್ಗದರ್ಶಕ ಹಾಗೂ ಆತ್ಮ ಸಂಗಾತಿ ಕಳೆದುಕೊಂಡು ತುಂಬಾ ಹಾನಿಯಾಗಿದೆ. ನನ್ನ ಉದ್ದೇಶ ಸಾಧಿಸುವಲ್ಲಿ ಯಾವಾಗಲೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು. ಜಾನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ನಾನು ನಿನ್ನನ್ನು ಗಾಢವಾಗಿ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಮಜುಂದಾರ್-ಶಾ ಹೇಳಿದ್ದಾರೆ.
ಸ್ಕಾಟ್ಸ್‌ಮನ್ ಜಾನ್ ಶಾ, 1999 ರಲ್ಲಿ ಬಯೋಕಾನ್‌ಗೆ ಸೇರುವ ಮೊದಲು ಪ್ರಮುಖ ಜವಳಿ ಕಂಪನಿ ಮಧುರಾ ಕೋಟ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಚಿಕ್ಕದಾಗಿ ಪ್ರಾರಂಭವಾದ ಬಯೋಕಾನ್ ಸಂಸ್ಥೆ ಜಾಗತಿಕವಾಗಿ ಮನ್ನಣೆ ಪಡೆಯುವಲ್ಲಿ ಜಾನ್ ಶಾ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಕಂಪನಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


