ರಾಜ್ಯ

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ದಾರುಣ ಸಾವು

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ದಾರುಣ ಸಾವು
ಸಂಗ್ರಹ ಚಿತ್ರ
Published On :

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.

ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ ನಲ್ಲಿ ಮುಂದೆ ಕುಳಿತು ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಯಿತು ಅರ್ಥವಾಗಿಲ್ಲ. ಸ್ಥಳದಲ್ಲಿದ್ದವರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಚಿಕಿತ್ಸೆ ನೀಡಲು ಮುಂದಾದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಪ್ರಕರಣ ಸಂಬಂಧ ಮಾಳ ಮಾರುತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.