ರಾಜ್ಯ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ದಂಪತಿ ದಾರುಣ ಸಾವು, 9 ಮಂದಿಗೆ ಗಾಯ

ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ದಂಪತಿ ದಾರುಣ ಸಾವು, 9 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ವಿಜಯಪುರ:  ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಕ್ರೂಸರ್‌ನಲ್ಲಿದ್ದ ಇತರೆ‌ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ.

ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಇರುವ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.