ಅದ್ಧೂರಿಯಾಗಿ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವ: ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್
ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.

ಹಾಸನ: ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.
ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಕ್ಲೋಸ್ ಆಗಲಿದೆ.
ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನೋತ್ಸವದ ಜೊತೆಗೇ ನಡೆಯುವ ಸಿದ್ದೇಶ್ವರ ಜಾತ್ರೋ ಮಹೋತ್ಸವ ಹಾಗೂ ಕೆಂಡೋತ್ಸವ ಜರುಗಿದೆ. ಮಧ್ಯ ರಾತ್ರಿ ಸಹಸ್ರಾರು ಭಕ್ತರು, ಮಂಗಳವಾದ್ಯ, ನಂದಿಕೋಲು ಕುಣಿತದ ಜೊತೆಗೆ ಹಾಸನಾಂಬೆ ದೇಗುಲದ ಆವರಣದಲ್ಲಿ ನಡೆದ ರಥೋತ್ಸವ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು.
ಕಳೆದ ಹದಿನೈದು ದಿನಗಳಿಂದ ಹಾಸನದ ಅಧಿ ದೇವತೆ ಹಾಸನಾಂಬೆ ದರ್ಶಣೋತ್ಸವ ಹಾಗು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಅ.26ರ ಮಧ್ಯ ರಾತ್ರಿ 12 ಗಂಟೆಗೆ ಸಿದ್ದೇಶ್ವರ ತೇರನ್ನೆಳೆದು ಭಕ್ತರು ಸಂಭ್ರಮಿಸಿದರು. ಕಳೆದ 15 ದಿನಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಾಸನಾಂಬೆ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


