ರಾಜ್ಯದಲ್ಲಿ ಇದೇ ಮೊದಲು; ಹೊಸ ಕಾನೂನಿನ ಅಡಿ ಅಕ್ರಮ ಕಸಾಯಿಖಾನೆಗೆ ಬೀಗ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ.
ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ ಯೂಸೂಫ್, ಹಕೀಮ್ ಹಾಗೂ ಸಿರಾಜ್ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದರು. ಅರ್ಕುಳದಲ್ಲಿ ಬತೀಷ್ ಎಂಬಾತ ಕಸಾಯಿಖಾನೆ ನಡೆಸುತ್ತಿದ್ದ. ಈ ಕಸಾಯಿಖಾನೆ ಹಾಗೂ ಅದಕ್ಕೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.
ಕೋರ್ಟ್ ಈ ಪ್ರಕರಣವನ್ನು ಇತ್ಯರ್ಥಪಡಿಸುವವರೆಗೂ ಕಸಾಯಿಖಾನೆಗಳಿದ್ದ ಕಟ್ಟಡದ ಮಾಲಿಕರು ಅದನ್ನು ಮಾರಾಟ ಮಾಡುವಂತಿಲ್ಲ ಎಂದು ಮಂಗಳೂರು ತಹಶಿಲ್ದಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


