ರಾಜ್ಯ

ಉಡುಪಿ: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು!

ಹೃದಯಾಘಾತದಿಂದ 13 ವರ್ಷದ ಬಾಲಕಿಯೊಬ್ಬಳು ಮೃತ ಪಟ್ಟಿರೋ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.

ಉಡುಪಿ: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು!
ಮೃತ ಬಾಲಕಿ ಅನುಶ್ರೀ
Published On :

ಉಡುಪಿ: ಹೃದಯಾಘಾತದಿಂದ 13 ವರ್ಷದ ಬಾಲಕಿಯೊಬ್ಬಳು ಮೃತ ಪಟ್ಟಿರೋ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ. 

ಅನುಶ್ರೀ (13) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ, ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ಓದುತ್ತಿದ್ದಳು. ಗುರುವಾರ ಬೆಳಿಗ್ಗೆ ಮನೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಬಾಲಕಿ ಸಾವನ್ನಪ್ಪಿದ್ದಾಳೆ. 

ಅನುಶ್ರೀಯ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆದಿದ್ದು, ಮರಣೋತ್ತರ ವರದಿ ಇನ್ನಷ್ಟೇ ದೊರೆಯಬೇಕಿದೆ. ಗುರುವಾರ ರಾತ್ರಿ ಬಾಲಕಿಯ ಅಂತ್ಯಕ್ರಿಯೆ ನಡೆಸಲಾಗಿದ್ದು, ಈ ಮೊದಲು ಪೋಷಕರು ಆಕೆಯ ಕಣ್ಣುಗಳನ್ನು ದಾನ ಮಾಡಿದ್ದಾರೆ. 

ಬಾಲಕಿ ಸಾವಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಮೃತ ಅನುಶ್ರೀಯು ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.