ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರು; ಕೆಎಂಎಫ್ನಿಂದ ಅಪ್ಪುಗೆ ವಿಶೇಷ ಗೌರವ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಪ್ಪು ಕನಸಿನ ಗಂಧದಗುಡಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಪ್ಪು ಕನಸಿನ ಗಂಧದಗುಡಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಈ ಮಧ್ಯೆ, ಕೆಎಂಎಫ್ ಸಹ ಗಂಧದಗುಡಿ ಚಿತ್ರಕ್ಕೆ ತನ್ನ ಬೆಂಬಲ ನೀಡಿದ್ದು, ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರು ಮುದ್ರಿಸುವ ಮೂಲಕ ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು ಕೆಎಂಎಫ್ ನಿರ್ಧರಿಸಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಈ ರೀತಿ ಗೌರವಿಸಲು ನಿರ್ಧರಿಸಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
ಈ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಕೆಎಂಎಫ್ ಅಂಬಾಸಿಡರ್ ಆಗಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಮುಂದಾಗಿದೆ.
ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


