ಬೆಂಗಳೂರು: ಉದ್ಯಮಿಯ ಐಶಾರಾಮಿ ಕಾರು, 75 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ಚಾಲಕನ ಬಂಧನ
75 ಲಕ್ಷ ರೂಪಾಯಿ ನಗದು ಸಹಿತ ಮಾಲೀಕನ ದುಬಾರಿ ಕಾರಿನೊಂದಿಗೆ ಪರಾರಿಯಾಗಿದ್ದ ಉದ್ಯಮಿಯ ಕಾರು ಚಾಲಕನನ್ನು ಬ್ಯಾಟರಾಯನಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 75 ಲಕ್ಷ ರೂಪಾಯಿ ನಗದು ಸಹಿತ ಮಾಲೀಕನ ದುಬಾರಿ ಕಾರಿನೊಂದಿಗೆ ಪರಾರಿಯಾಗಿದ್ದ ಉದ್ಯಮಿಯ ಕಾರು ಚಾಲಕನನ್ನು ಬ್ಯಾಟರಾಯನಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ವಿ.ಸಂತೋಷ್ ಕುಮಾರ್ (34) ಬಂಧಿತ ಆರೋಪಿಯಾಗಿದ್ದಾನೆ. ಉದ್ಯಮಿ ಪಿ ಹರೀಶ್ ಅವರು ಹೈದರಾಬಾದ್‌ನಲ್ಲಿರುವ ತಮ್ಮ ಫ್ಲಾಟ್ ಅನ್ನು ಮಾರಿ ಕಾರಿನಲ್ಲಿ ಹಣವನ್ನು ಸಾಗಿಸುತ್ತಿದ್ದರು. ಪಾರ್ಟಿಯೊಂದಕ್ಕೆ ಆರೋಪಿ ವಿ.ಸಂತೋಷ್ ಕುಮಾರ್ ಜೊತೆಗೆ ಹೋಗಿದ್ದ ಹರೀಶ್, ಕಾರಿನಲ್ಲಿ ಮನೆಗೆ ಹಿಂತಿರುತ್ತಿದ್ದರು.
ಈ ವೇಳೆ ದಾರಿ ಮಧ್ಯೆ ಸಿಗರೇಟ್ ತೆಗೆದುಕೊಳ್ಳಬೇಕು ಕಾರು ನಿಲ್ಲಿಸು ಎಂದು ಸಂತೋಷ್'ಗೆ ಹೇಳಿದ್ದಾರೆ. ಸಿಗರೇಟ್ ತೆಗೆದುಕೊಂಡು ಬರುವಷ್ಟರಲ್ಲಿ ಚಾಲಕ ಹಣ ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದಾನೆ.
ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ರೂ.72 ಲಕ್ಷ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ಸಂತೋಷ್ ಕುಮಾರ್, ಸೆ.19ರಂದು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಎಸ್ ಯುವಿ ಮತ್ತು ನಗದು ಸಮೇತ ಪರಾರಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


