ಲಾಲ್‌ಬಾಗ್: 'ಗುತ್ತಿಗೆ ಜಮೀನಿನ ನವೀಕರಣ ರದ್ದು ಮಾಡಿ' ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಲಾಲ್‌ಬಾಗ್ ಆವರಣದಲ್ಲಿರುವ ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್‌ಗೆ ನೀಡಲಾಗಿದ್ದ 1 ಎಕರೆ 29 ಗುಂಟೆ ಜಮೀನಿನ ಗುತ್ತಿಗೆಯನ್ನು ರದ್ದು ಮಾಡುವಂತೆ ತೋಟಗಾರಿಕೆ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಲಾಲ್‌ಬಾಗ್ ಆವರಣದಲ್ಲಿರುವ ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್‌ಗೆ ನೀಡಲಾಗಿದ್ದ 1 ಎಕರೆ 29 ಗುಂಟೆ ಜಮೀನಿನ ಗುತ್ತಿಗೆಯನ್ನು ರದ್ದು ಮಾಡುವಂತೆ ತೋಟಗಾರಿಕೆ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನರ್ಸರಿಗೆ ಏಕಾಏಕಿ ಬೀಗ ಹಾಕಿರುವುದರಿಂದ ಅಕ್ಟೋಬರ್ 21ರಿಂದ ರೂ.1 ಕೋಟಿಯಿಂದ 1.5 ಕೋಟಿಯಷ್ಟು ಗಿಡಗಳಿಗೆ ನೀರುಣಿಸಲಾಗದೇ ಸೊಸೈಟಿಯ ಆದಾಯಕ್ಕೆ ನಷ್ಟ ಉಂಟಾಗಿದೆ. ಹೀಗಾಗಿ ತಕ್ಷಣವೇ ನ್ಯಾಯಾಲಯ ಮಧ್ಯಪ್ರವೇಶ ಮಾಡಬೇಕು ಎಂದು ನರ್ಸರಿಮೆನ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಗೋವಿಂದ್ ಮತ್ತು ಸದಸ್ಯ ನಿರ್ದೇಶಕ ಆರ್ ರವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಮಧ್ಯಂತರ ಆದೇಶ ನೀಡಿದ್ದು, ಪ್ರಕರಣವು ಇತ್ಯರ್ಥಗೊಳ್ಳುವವರೆಗೂ ಲಾಲ್‌ಬಾಗ್‌ನಲ್ಲಿ ಕಾರ್ಯಚಟುವಟಿಕೆ ಮುಂದುವರೆಸಲು ಸೊಸೈಟಿಗೆ ನ್ಯಾಯಲಯ ಅನುಮತಿ ನೀಡಿದೆ.
ಸರ್ಕಾರವು 1991ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಲಾಲ್‌ಬಾಗ್‌ನಲ್ಲಿ ಒಂದು ಎಕರೆ 29 ಗುಂಟೆ ಭೂಮಿಯನ್ನು 25 ವರ್ಷಗಳ ಅವಧಿಗೆ ನರ್ಸರಿ ಸೇವೆಗಳನ್ನು ನಡೆಸಲು ಗುತ್ತಿಗೆ ರೂಪದಲ್ಲಿ ಪರವಾನಗಿ ನೀಡಿತ್ತು. ಗುತ್ತಿಗೆ ಅವಧಿಯು 2016ರಲ್ಲಿ ಪೂರ್ಣಗೊಂಡಿತ್ತು.
ಇದಕ್ಕೂ ಮುನ್ನ ಸೊಸೈಟಿ ಸರ್ಕಾರಕ್ಕೆ ಪತ್ರ ಬರೆದು ಮತ್ತೆ 25 ವರ್ಷಗಳವರೆಗೆ ಗುತ್ತಿಗೆ ನವೀಕರಿಸಲು ಮನವಿ ಮಾಡಿತ್ತು. ಆದರೆ, ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ. ಆದರೆ, 2016 ಮತ್ತು 2022ರ ನಡುವೆ ಸರ್ಕಾರಕ್ಕೆ ಅಗತ್ಯ ತೆರಿಗೆಗಳನ್ನು ಪಾವತಿಸಲಾಗಿದೆ. ಇದೀಗ ಗುತ್ತಿಗೆ ರದ್ದು ಕುರಿತು ಸರ್ಕಾರ ಏಕಾಏಕಿ ನಿರ್ಧಾರ ತೆಗೆದುಕೊಂಡಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


