ಚಲಿಸುತ್ತಿದ್ದ ಕಾರಿನಲ್ಲೇ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು
ಉಡುಪಿ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಿಂದ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಿಂದ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಆತನ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, ವಿಶಾಲ್ ಕೊಹ್ಲಿ ಎಂಬಾತನನ್ನು ಮಣಿಪಾಲ ನಗರದಲ್ಲಿ ಬಂಧಿಸಲಾಗಿದೆ. ಯುವಕ ತನ್ನ ಕಾರಿನ ಮೇಲೆ ಸ್ಕೈ ಶಾಟ್ ಪಟಾಕಿಗಳನ್ನು ಇಟ್ಟು ಸಿಡಿಸಿದ್ದ. ಈತ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದಂತೆ ಸ್ಕೈ ಶಾಟ್ ಪಟಾಕಿಗಳು ಒಂದರ ಹಿಂದೆ ಒಂದರಂತೆ ಸಿಡಿಯುತ್ತಲೇ ಇದ್ದವು.
ಪೆಟ್ರೋಲ್ ಪಂಪ್‌ನ ಹತ್ತಿರ ಕಾರು ಅಪಾಯಕಾರಿಯಾಗಿ ಚಲಿಸಿದಾಗ ಕೊಹ್ಲಿ ಮತ್ತು ಇತರ ಸಾರ್ವಜನಿಕರು ಸ್ವಲ್ಪದರಲ್ಲೇ ಪಾರಾಗಿದ್ದರು. ವಿಶಾಲ್ ಅವರ ಕೃತ್ಯದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಅದರ ಬಗ್ಗೆ ಕಳವಳ ವ್ಯಕ್ತಪಡಿಸುವುದರೊಂದಿಗೆ ಕಮೆಂಟ್‌ಗಳ ಸುರಿಮಳೆಗೈದಿದ್ದಾರೆ.
ಗುರುವಾರ ಘಟನೆ ನಡೆದಿದ್ದು, ವಿಶಾಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ಮಣಿಪಾಲ ಪೊಲೀಸರು ಆತನನ್ನು ಪತ್ತೆ ಹಚ್ಚಿ ಇಂದು ಬೆಳಗ್ಗೆ ಬಂಧಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


