ರಾಜ್ಯ

ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ
ಸಿದ್ದರಾಮಯ್ಯ
Published On :

ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಂಡ್ಯ ತಾಲೂಕಿನ ತಿರುಮಲಾಪುರದಲ್ಲಿ ಹುಲಿಯೂರಮ್ಮ ದೇವಸ್ಥಾನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯಲಿಲ್ಲ, ಬಡವರಿಗೆ ದ್ರೋಹ ಬಗೆದಿಲ್ಲ ಎಂದಿದ್ದಾರೆ.

ಮೀಸಲಾತಿ ಹೆಚ್ಚಿಸಲು ಕೆಲವು ಸಮುದಾಯಗಳು ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಯಾರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ್ದಾರೆ, ಶೋಷಣೆಗೆ ಒಳಪಟ್ಟಿದ್ದಾರೆ. ಅವರಿಗೆ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಈ ಸರ್ಕಾರಗಳಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂಬುದು ಇದೀಗ ಎಲ್ಲರಿಗೂ ಅರ್ಥವಾಗುತ್ತಿದೆ. ದೇಶ, ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು ಬಡವರು, ರೈತರು, ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮಾರಕವಾಗಿವೆ. ಅಲ್ಲದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಭಿತ್ತಿ ಜನರು ನೆಮ್ಮದಿಯಿಂದ ಬದುಕಲಾರದ ವಾತಾವರಣ ನಿರ್ಮಾಣ ಮಾಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿಲ್ಲ ಎಂದು ಆರೋಪಿಸಿದರು. ಎಸ್‌ಸಿ/ಎಸ್‌ಟಿಗಳ ಪರವಾಗಿ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕುಗಳಿವೆ? ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬೇಕೆ,'' ಎಂದು ಪ್ರಶ್ನಿಸಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ. ಮಂಡ್ಯದಲ್ಲಿ ಮೈಶುಗರ್ ಕಾರ್ಖಾನೆ ತೆರೆಯಲು ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.