ರಾಜ್ಯ

ಮಂಡ್ಯ: ಪ್ರಥಮ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡ ಬಳಿಕ ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆ

ನಟ ಪುನೀತ್‌ರಾಜ್‌ಕುಮಾರ್ ಮೃತಪಟ್ಟು ಒಂದು ವರ್ಷ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗಿಲ್ಲ. ಶನಿವಾರವಷ್ಟೇ ಅಪ್ಪು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ: ಪ್ರಥಮ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡ ಬಳಿಕ ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆ
ನಟ ಪುನೀತ್‌ ರಾಜ್‌ಕುಮಾರ್ ಅವರೊಂದಿಗೆ ಮೃತ ಕಿರಣ್
Published On :

ಮಂಡ್ಯ: ನಟ ಪುನೀತ್‌ರಾಜ್‌ಕುಮಾರ್ ಮೃತಪಟ್ಟು ಒಂದು ವರ್ಷ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗಿಲ್ಲ. ಶನಿವಾರವಷ್ಟೇ ಅಪ್ಪು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ಆನಂದೂರು ಗ್ರಾಮದಲ್ಲಿ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಹರೀಶ್ ಎಂಬುವವರ ಪುತ್ರ 22 ವರ್ಷದ ಕಿರಣ್ ಶನಿವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದು, ತಮ್ಮ‌ ನೆಚ್ಚಿನ ನಟನ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತಾವೇ ಮುಂದೆ ನಿಂತು ಆಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಅಪ್ಪು ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ 25 ಟಿಕೆಟ್‌ಗಳನ್ನು ತಂದು ಸ್ನೇಹಿತರಿಗೆ ನೀಡಿದ್ದರು. ಪುಣ್ಯ ಸ್ಮರಣೆ ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೆ.ಆರ್.ಎಸ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.