ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ: ತನಿಖೆಗೆ ಸಿಎಂ ಬೊಮ್ಮಾಯಿ ಆದೇಶ
ಇನ್ಸ್ ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಇನ್ಸ್ ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ಸಂಪೂರ್ಣವಾಗಿ ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತ ವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯ ಹೊರಗೆ ಬರಲಿ ಎಂದರು.
ಈ ಮಧ್ಯೆ ಸೋಲಾರ್ ಹಗರಣ ತನಿಖೆಯಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಕಾದು ನೋಡಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


