ಬೆಂಗಳೂರು: ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಕ್ಯಾಂಪಸ್ 'ಕ್ಷೇಮವನ' ಉದ್ಘಾಟಿಸಿದ ಯೋಗಿ ಆದಿತ್ಯನಾಥ್
ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಕ್ಷೇಮವನ ಎಂಬ ಹೆಸರಿನಲ್ಲೇ ನೆಮ್ಮದಿ ಇದೆ. ಮೊದಲೆಲ್ಲ ಪೊಸ್ಟ್ ಕಾರ್ಡ್ ನಲ್ಲಿ ಕ್ಷೇಮಾ ಎಂದು ಬರೆಯುತ್ತಿದ್ದರು. ಕ್ಷೇಮಾ ಬಿಟ್ಟು ಎಲ್ಲಾ ರೂಡಿಸಿಕೊಂಡಿದ್ದೇವೆ ನಾವು. ಆತ್ಮ ಮತ್ತು ದೇಹವನ್ನ ನೈಸರ್ಗಿಕ ಶುದ್ದೀಕರಣವಾಗಿದೇ ಈ ಕ್ಷೇಮವನ. ಈ ವನದಲ್ಲಿ ಧರ್ಮವೂ ಸೇರಿಕೊಂಡಿದೆ ಎಂದು ಹೇಳಿದರು.
ಯೋಗಿ ಬಂದಿದ್ದು ಹೆಮ್ಮೆ ಮತ್ತು ಬಹಳಷ್ಟು ಸಂತೋಷವಾಗಿದೆ. ಕರ್ನಾಟಕಕ್ಕೂ ಅವರಿಗೂ ಸಂಬಂಧವಿದೆ. Spirituality and administration ಎರಡು ಮಾಡಬಹುದು ಎಂದು ಯೋಗಿ ತೋರಿಸಿಕೊಟ್ಟಿದ್ದಾರೆ. ನಮ್ಮ ಸಮಾಜದಲ್ಲಿ ಗುರುಗಳಿಗೆ ಉನ್ನತ ಸ್ಥಾನವಿದೆ. ಇವರು ನಡೆದಂತೆ ನಡೆದಿದ್ದಾರೆ. ಒಬ್ಬರು ಸ್ವಾಮೀಜಿ ದಕ್ಷ ಆಡಳಿತಗಾರ ಎಂದು ತೋರಿಸಿದ್ದಾರೆ ಎಂದರು.
ದೇಶದ ದೊಡ್ಡ ರಾಜ್ಯದ ಮುಖ್ಯಮಂತ್ರಿಯಾದ ಯೋಗಿ ಆದಿತ್ಯನಾಥ್ ಅವರು ದಕ್ಷ ಪ್ರಮಾಣಿಕ ಹಾಗೂ ಯಶಸ್ವಿ ಸಿಎಂ. ಯೋಗಿ ಬಂದಿದ್ದು ಹೆಮ್ಮೆ ಮತ್ತು ಬಹಳಷ್ಟು ಸಂತೋಷವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮುಂತಾದವರು ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


