ಬೆಂಗಳೂರಿನಲ್ಲಿ 1.59 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ
ಕೆರೆಗಳು, ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಬುಧವಾರ ಒಟ್ಟು 1.59 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು.

ಬೆಂಗಳೂರು: ಕೆರೆಗಳು, ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಬುಧವಾರ ಒಟ್ಟು 1.59 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಬಿಬಿಎಂಪಿ ಪ್ರಕಾರ, ಹಬ್ಬದ ದಿನದಂದು ಪೂಜೆಯ ನಂತರ ಪಾಲಿಕೆಯ ಎಂಟು ವಲಯಗಳಲ್ಲಿ 1,59,980 ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಬಳಕೆಗೆ ನಿಷೇಧವಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ 12,000 ಮೂರ್ತಿಗಳು ಪತ್ತೆಯಾಗಿವೆ. ಆದಾಗ್ಯೂ, ಅಧಿಕಾರಿಗಳು ಅಂತಹ ವಿಗ್ರಹಗಳು ಜಲಮೂಲಗಳಲ್ಲಿ ವಿಸರ್ಜನೆಯಾಗದಂತೆ ತಡೆದು ಬೇರೆಡೆ ವ್ಯವಸ್ಥೆ ಮಾಡಿದರು.
ಆ.31ರಂದು ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕಲ್ಯಾಣಿ/ ಹೊಂಡಗಳಲ್ಲಿ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅತಿ ಹೆಚ್ಚು ಮಣ್ಣಿನ ಮೂರ್ತಿಗಳು (68,521) ದಕ್ಷಿಣ ವಲಯದಲ್ಲಿ ವಿಸರ್ಜನೆಯಾಗಿದ್ದು, ಇದೇ ವಲಯದಲ್ಲಿ ಅತಿ ಹೆಚ್ಚು ಪಿಒಪಿ ಮೂರ್ತಿಗಳೂ (11,402) ವಿಸರ್ಜನೆಯಾಗಿವೆ.
ಪಶ್ಚಿಮ ವಲಯ (306) ಇದೆ. ಆರ್.ಆರ್. ನಗರ– 152, ಬೊಮ್ಮನಹಳ್ಳಿ– 131, ಯಲಹಂಕ– 73, ದಾಸರಹಳ್ಳಿ ವಲಯದಲ್ಲಿ 22 ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿವೆ. ಪೂರ್ವ ಹಾಗೂ ಮಹದೇವಪುರ ವಲಯಲದಲ್ಲಿ ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿಲ್ಲ. ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಯಡಿಯೂರು ಕೆರೆಯಲ್ಲಿ 68,521 ವಿಗ್ರಹಗಳನ್ನು ವಿಸರ್ಜನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


