ರಾಜ್ಯ

ಕಾರಾಗೃಹದಲ್ಲಿ ರಾತ್ರಿಯಿಡೀ ಕಳೆದ ಮುರುಘಾ ಶ್ರೀಗಳಿಗೆ ಎದೆನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಕಾರಾಗೃಹದಲ್ಲಿ ರಾತ್ರಿಯಿಡೀ ಕಳೆದ ಮುರುಘಾ ಶ್ರೀಗಳಿಗೆ ಎದೆನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್
ಮುರುಘಾ ಶ್ರೀಗಳ ಸಂಗ್ರಹ ಚಿತ್ರ
Published On :

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳನ್ನು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಇಂದು ಬೆಳಗ್ಗೆ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಕರೆತರಲಾಗಿದ್ದು ವೈದ್ಯರು ಅವರ ಆರೋಗ್ಯ ತಪಾಸಣೆ ಮಾಡಿದ್ದಾರೆ.

ಕಳೆದ ಮಧ್ಯರಾತ್ರಿ ಮುರುಘಾ ಮಠಕ್ಕೆ ಆಗಮಿಸಿದ ಪೊಲೀಸರು ತನಿಖಾಧಿಕಾರಿ ಅನಿಲ್​​​​​ ಕುಮಾರ್​ ನೇತೃತ್ವದಲ್ಲಿ ಸ್ವಾಮೀಜಿಯನ್ನು ಬಂಧಿಸಿದರು. ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಜೈಲಿಗೆ ಕರೆದೊಯ್ಯಲಾಗಿದೆ.  ಜೈಲಿನ ಕೋಣೆಯಲ್ಲಿ ನಿದ್ದೆ ಮಾಡದೇ ಚಡಪಡಿಸುತ್ತಿದ್ದ ಸ್ವಾಮೀಜಿ, ಕೋಣೆಯಲ್ಲಿ ಅಡ್ಡಾಡಿದರು ಎಂದು ತಿಳಿದುಬಂದಿದೆ. ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಕೇಳುವ ಸಾಧ್ಯತೆಗಳಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಕೋರುವ ಪೊಲೀಸರು, ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.

ತಲೆಮೇಲೆ ಹಾಗೂ ಮೈತುಂಬಾ ಬಿಳಿ ಬಟ್ಟೆಯನ್ನು ಹೊದ್ದು ನಿನ್ನೆ ಪೊಲೀಸರ ಜೊತೆ ಮಠದಿಂದ ತೆರಳಿದ್ದ ಶ್ರೀಗಳು ಇಂದು ಬೆಳಗ್ಗೆ ಆಸ್ಪತ್ರೆಗೆ ಸಹ ಮೈತುಂಬಾ ಬಿಳಿಬಟ್ಟೆಯನ್ನು ಹೊದ್ದುಕೊಂಡೇ ಬಂದರು. ಅಗತ್ಯಬಿದ್ದರೆ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವರ್ಗಾಯಿಸಲಾಗುವ ಸಾಧ್ಯತೆಯಿದೆ. ಎದೆನೋವು ಎಂದು ಸಮಸ್ಯೆ ಹೇಳಿಕೊಂಡು ಬಂದ ಶ್ರೀಗಳಿಗೆ ಇಸಿಜಿ ಮಾಡಲಾಗಿದೆ. ಆಸ್ಪತ್ರೆಯ ಮೂವರು ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.