ರಾಜ್ಯ

ಸಿಇಟಿ ರ್ಯಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಸೋಮವಾರ ಸಚಿವರ ನೇತೃತ್ವದಲ್ಲಿ ಸಭೆ

2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ...

ಸಿಇಟಿ ರ್ಯಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಸೋಮವಾರ ಸಚಿವರ ನೇತೃತ್ವದಲ್ಲಿ ಸಭೆ
ಅಶ್ವತ್ಥನಾರಾಯಣ
Published On :

ಬೆಂಗಳೂರು: 2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸೋಮವಾರ ಬೆಳಗ್ಗೆ ಮಹತ್ವದ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ‌ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಮತ್ತು ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ನ್ಯಾಯಾಲಯದ ತೀರ್ಪಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಮುಂದಿನ ಕ್ರಮ ಕುರಿತು ನಿರ್ಧರಿಸಲಾಗುವುದು ಎಂದಿದ್ದಾರೆ.

2020-21ರಲ್ಲಿ ಕೊರೋನಾ ಕಾರಣದಿಂದಾಗಿ ಪಿಯುಸಿ ಪರೀಕ್ಷೆ ನಡೆಸದೆ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಆದರೆ, ಹೀಗೆ ಪ್ರವೇಶಾವಕಾಶ ಪಡೆದುಕೊಂಡ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಲ್ಲದೆ, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಕೂಡ ಪರಿಗಣಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.