ರಾಜ್ಯ

ರಾಮನಗರ: ಮನಕಲಕುವ ಘಟನೆ, ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾದ ತಾಯಿ

ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ನೀಡಿದ ಮಹಿಳೆಯೊಬ್ಬರು ಬಳಿಕ ತಾನೂ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಸಮೀಪದ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ರಾಮನಗರ: ಮನಕಲಕುವ ಘಟನೆ, ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾದ ತಾಯಿ
ಆತ್ಮಹತ್ಯೆಗೆ ಶರಣಾದ ರೂಪಾ
Published On :

ರಾಮನಗರ: ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ನೀಡಿದ ಮಹಿಳೆಯೊಬ್ಬರು ಬಳಿಕ ತಾನೂ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಸಮೀಪದ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಮಾಗಡಿ ತಾಲೂಕ್ ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪಾ (32) ಮತ್ತು ಅವರ ಮಕ್ಕಳಾದ ಸ್ಪೂರ್ತಿ(6) ಹರ್ಷಿತಾ (4) ಮೃತಪಟ್ಟ ದುರ್ದೈವಿಗಳು. ರೂಪಾ ತನ್ನ ಜಮೀನಿನಲ್ಲಿ ಇಬ್ಬರು ಮಕ್ಕಳಾದ ಸ್ಪೂರ್ತಿ ಹಾಗೂ ಹರ್ಷಿತಾ ಅವರಿಗೆ ವಿಷ ನೀಡಿದ್ದಾರೆ. ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದರಿಂದಾಗಿ ಗ್ರಾಮದಲ್ಲಿ ದು:ಖ ಆವರಿಸಿದ್ದು, ಒಂದೇ ಕುಟುಂಬದ ಮೂವರ ಸಾವಿನಿಂದ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.