ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಚಿಕನ್ ತರಲು ಹೋದವನು ಹೆಣವಾದ!
ನಗರದ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಅಪಘಾತಕ್ಕೀಡಾಗಿದ್ದು, ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕ ಮೃತಪಟ್ಟಿದ್ದಾರೆ.

ಬೆಂಗಳೂರು: ನಗರದ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಅಪಘಾತಕ್ಕೀಡಾಗಿದ್ದು, ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕ ಮೃತಪಟ್ಟಿದ್ದಾರೆ.
ಮೃತರನ್ನು ಮಾವಿನಕುಂಟೆ ಗ್ರಾಮದ ನಿವಾಸಿ ರಾಜಾ ಆರ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಮೃತ ರಾಜ ಮನೆಗೆ ಕೋಳಿ ಖರೀದಿಸಿ ಹೋಗುತ್ತಿದ್ದಾಗ ಮೂಗೇನಹಳ್ಳಿ ಕ್ರಾಸ್ ಬಳಿ ಅಪಘಾತ ಘಟನೆ ನಡೆದಿದೆ. ಎದುರಿನಿಂದ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಇವರ ಬೈಕ್‌ಗೆ ಡಿಕ್ಕಿ ಹೊಡೆದು ರಾಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಕಸದ ಲಾರಿ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳೀಯರು ಪ್ರತಿಭಟನೆ ನಡೆಸಿ ಶವವನ್ನು ಸ್ಥಳದಿಂದ ಸ್ಥಳಾಂತರಿಸಲು ಪೊಲೀಸರಿಗೆ ಅವಕಾಶ ನೀಡಲಿಲ್ಲ. ಚಿಗುರನಹಳ್ಳಿಯಲ್ಲಿರುವ ಎಂಎಸ್‌ಜಿಪಿ ತ್ಯಾಜ್ಯ ಟೆಕ್ ಪಾರ್ಕ್ ಅನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ತ್ಯಾಜ್ಯ ಪಾರ್ಕ್‌ಗೆ ತೆರಳುವ ಬಿಬಿಎಂಪಿ ಕಸದ ಲಾರಿ ಚಾಲಕರು ವಾಹನಗಳನ್ನು ಅಜಾಗರೂಕತೆಯಿಂದ ಓಡಿಸುತ್ತಾರೆ ಎಂದು ಆರೋಪಿಸಿದರು. ಆದರೆ, ಪೊಲೀಸರು ಸ್ಥಳೀಯರ ಮನವೊಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


