ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎ
ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ಬೆಂಗಳೂರು: ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗುತ್ತಾ ಹರ್ಷನನ್ನು ಕೊಂದಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.
ರಾಜ್ಯದಲ್ಲಿ ಎದಿದ್ದ ಹಿಜಾಬ್ ವಿವಾದ ನಡುವೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಹರ್ಷನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳು ಸಿಎಎ-ಎನ್ ಆರ್ ಸಿ ವಿಚಾರ, ಹಿಜಾಬ್ ವಿವಾದ ಮತ್ತು ಭಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ ಚಟುವಟಿಕೆಗಳಿಂದ ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ.
ಇದೇ ಕಾರಣಗಳಿಂದ ಆರೋಪಿಗಳು ಹಿಂದೂ ಸಮುದಾಯದಲ್ಲಿ ಭೀತಿಯನ್ನು ಸೃಷ್ಟಿಸಲು ಮತ್ತು ಶಿವಮೊಗ್ಗ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರ ನಡುವೆ ಕೋಮು ಸೌಹಾರ್ದತೆ ಹದಗಡೆಸಿ ದ್ವೇಷವನ್ನು ಸೃಷ್ಟಿಸಲು ಸಂಚು ರೂಪಿಸಿದ್ದಾರೆ ಎಂದು ಅದು ಹೇಳಿದೆ.
ಆರೋಪಿಗಳು ಶಿವಮೊಗ್ಗದ ಪ್ರಮುಖ ಹಿಂದೂ ಸಮುದಾಯದ ಮುಖಂಡರ ಮೆರವಣಿಗೆಗಳು, ಆಚರಣೆಗಳು ಮತ್ತು ಸಮುದಾಯದ ಕಾರ್ಯಕ್ರಮಗಳ ಚಲನವಲನವನ್ನು ಗಮನಿಸುತ್ತಿದ್ದರು. ನಂತರ ಹರ್ಷವನ್ನು ಪ್ರಮುಖ ಹಿಂದೂ ಸಮುದಾಯದ ಮುಖಂಡ ಎಂದು ತಿಳಿದು ಹತ್ಯೆ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


