ರಾಜ್ಯ

ವೃತ್ತಿಪರ ಕೋರ್ಸುಗಳಿಗೆ ಕೌನ್ಸೆಲಿಂಗ್: ಸೆಪ್ಟೆಂಬರ್ 13ರಂದು ಮತ್ತೆ ಕ್ಯುಪೇಕಾ ಜತೆ ಸಭೆ - ಅಶ್ವತ್ಥ ನಾರಾಯಣ

ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶಾತಿ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ (Comedke)ಯಾವಾಗ ಕೌನ್ಸೆಲಿಂಗ್ ಪ್ರಾರಂಭಿಸಬೇಕು ಎನ್ನುವುದನ್ನು ನಿರ್ಧರಿಸಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್...

ವೃತ್ತಿಪರ ಕೋರ್ಸುಗಳಿಗೆ ಕೌನ್ಸೆಲಿಂಗ್: ಸೆಪ್ಟೆಂಬರ್ 13ರಂದು ಮತ್ತೆ ಕ್ಯುಪೇಕಾ ಜತೆ ಸಭೆ - ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ
Published On :

ಬೆಂಗಳೂರು: ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶಾತಿ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ (Comedke)ಯಾವಾಗ ಕೌನ್ಸೆಲಿಂಗ್ ಪ್ರಾರಂಭಿಸಬೇಕು ಎನ್ನುವುದನ್ನು ನಿರ್ಧರಿಸಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ(ಕ್ಯುಪೇಕಾ) ಜತೆ ಸೆ.13ರಂದು ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಬುಧವಾರ ತಿಳಿಸಿದ್ದಾರೆ.

ಕ್ಯುಪೇಕಾ ಪ್ರತಿನಿಧಿಗಳ ಜತೆ ಇಂದು ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ ಪರಸ್ಪರ ಸಮಾಲೋಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ರೂಪಿಸಲಿವೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಸರಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಕ್ಯುಪೇಕಾ ಪರವಾಗಿ ಎಂ ಆರ್ ಜಯರಾಂ, ಶಾಮ್ ಮತ್ತು ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘದ ಅಧ್ಯಕ್ಷ ಶಫಿ ಅಹಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.