ಮಳೆಹಾನಿ: ಕಲಬುರಗಿ, ಹುಬ್ಬಳ್ಳಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ
ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಕಲಬುರಗಿ: ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.
ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಿ.ಕೆ. ಮನೋಹರನ್ ನೇತೃತ್ವದಲ್ಲಿನ ಕೇಂದ್ರ ಅಧ್ಯಯನ ತಂಡ, ಆಗಸ್ಟ್ ತಿಂಗಳಲ್ಲಿ ಕಲಬುರಗಿಯ ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿ ಕುರಿತು ಪರಿಶೀಲನೆ ನಡೆಸಿತು.
ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದ ತಂಡ ಆಗಸ್ಟ್ 2 ರಿಂದ 9 ರ ನಡುವೆ ಭಾರೀ ಮಳೆಯಿಂದ ಹಾನಿ ಕುರಿತು ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಪ್ರವಾಹದಿಂದಾಗಿ ಸುಮಾರು 11, 000 ಟ್ರ್ಯಾಕ್ಟರ್‌ಗಳು ಮತ್ತು 8, 500 ಮನೆಗಳು ಹಾನಿಗೊಳಗಾಗಿವೆ. ಕೇಂದ್ರ ತಂಡ ಈ ವಲಯದಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ಸಹ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ತಿಳಿಸಿದರು.
ಮತ್ತೊಂದು ತಂಡ ಹುಬ್ಬಳ್ಳಿಯ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇನ್ನೂ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ಹಾನಿ ಕುರಿತ ವರದಿ ಸಲ್ಲಿಸುವುದಾಗಿ ಕೇಂದ್ರ ತಂಡ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


