ಬೆಂಗಳೂರು: ಖೋಟಾ ನೋಟು ತಯಾರಿಕಾ ಜಾಲ ಪತ್ತೆ, ಇಬ್ಬರು ಸೆರೆ
ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪ್ರದೀಪ್ ಅಲಿಯಾಸ್ ಉನ್ನಿ ಮತ್ತು ಸನಲ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 3.16 ಲಕ್ಷ ರೂ ಮೌಲ್ಯದ 500 ಮತ್ತು 2 ಸಾವಿರ ರೂ ಮುಖ ಬೆಲೆಯ ಖೋಟಾ ನೋಟುಗಳು ಮತ್ತು 46 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಬಸವನಪುರ ವಿಲೇಜ್‌ನಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಜೆಪಿ ಠಾಣೆ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶಾಂತಿ ಎಂಬವರು ಮನೆಯ ಕಿಟಕಿ ಪಕ್ಕದ ಟೇಬಲ್ ಮೇಲಿಟ್ಟಿದ್ದ ಚಿನ್ನದ ಸರ ಕಳವು ಮಾಡಲಾಗಿತ್ತು. ಅಲ್ಲದೇ, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ದೋಚಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಘಟನಾ ಸ್ಥಳದ ಸಿಸಿ ಕ್ಯಾಮರಾ ಮತ್ತು ನಿಖರ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಖೋಟಾ ನೋಟು ಪತ್ತೆ
ಬಂಧಿತರ ವಿಚಾರಣೆ ವೇಳೆ ಛಾಪಾ ಕಾಗದ (ಬಾಂಡ್ ಪೇಪರ್)ಗಳ ಮೇಲೆ 500 ಮತ್ತು 2 ಸಾವಿರ ಮುಖ ಬೆಲೆಯ ನೋಟುಗಳನ್ನು ಕಲರ್ ಜೆರಾಕ್ಸ್ ಮೂಲಕ ಮುದ್ರಿಸಿ ಅಸಲಿ ನೋಟುಗಳು ಎಂದು ಬದಲಾವಣೆ ಮಾಡುತ್ತಿದ್ದರು ಎಂಬುದೂ ಗೊತ್ತಾಗಿದೆ. ಲಕ್ಷಾಂತರ ರೂ.ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಆರೋಪಿಗಳು ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ಸರ ಕಳವು ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳವು ಮಾಡಿದ್ದ ಚಿನ್ನಾಭರಣಗಳನ್ನು ಕರಗಸಿ ಚಿನ್ನದ ಗಟ್ಟಿಗಳನ್ನಾಗಿ ಮಾಡಿ, ಬಂಗಾರದ ಅಂಗಡಿಗಳು ಮತ್ತು ಫೈನಾನ್ಸ್ ಕಂಪನಿಗಳಲ್ಲಿ ಅಡಮಾನ ಇಟ್ಟು ಮೋಜಿನ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


