ಪ್ರತಿ ವರ್ಷ 5 ಲಕ್ಷ ಅಪಘಾತ, 3 ಲಕ್ಷ ಮಂದಿ ಸಾವಿನಿಂದ ದೇಶದ ಜಿಡಿಪಿಗೆ ನಷ್ಛ; ಹೆದ್ದಾರಿ ಆಡಿಟ್ ನಡೆಸಲು ಗಡ್ಕರಿ ಸೂಚನೆ
ಪ್ರತಿ ವರ್ಷ 5 ಲಕ್ಷ ಅಪಘಾತಗಳು ವರದಿಯಾಗುತ್ತಿದ್ದು, ಅದರಲ್ಲಿ 3 ಲಕ್ಷ ಮಂದಿ ಸಾವನ್ನಪ್ಪುತ್ತಿರುವುದು ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟ ಉಂಟು ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಹೆದ್ದಾರಿಗಳಲ್ಲಿನ ಅಪಘಾತಗಳ ಲೆಕ್ಕಪರಿಶೋಧನೆ ನಡೆಸುವಂತೆ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.

ಬೆಂಗಳೂರು: ಪ್ರತಿ ವರ್ಷ 5 ಲಕ್ಷ ಅಪಘಾತಗಳು ವರದಿಯಾಗುತ್ತಿದ್ದು, ಅದರಲ್ಲಿ 3 ಲಕ್ಷ ಮಂದಿ ಸಾವನ್ನಪ್ಪುತ್ತಿರುವುದು ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟ ಉಂಟು ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಹೆದ್ದಾರಿಗಳಲ್ಲಿನ ಅಪಘಾತಗಳ ಲೆಕ್ಕಪರಿಶೋಧನೆ ನಡೆಸುವಂತೆ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಾರಿಗೆ ಅಭಿವೃದ್ಧಿ ಮಂಡಳಿಯ 41ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲೆಕ್ಕಪರಿಶೋಧನೆ ನಡೆಸಲು ದುಬಾರಿ ವೆಚ್ಚವಾಗಬಹುದು. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಂತ್ರಿಕ ಸಂಸ್ಥೆಗಳಲ್ಲಿನ ಅಧ್ಯಾಪಕರ ಪರಿಣತಿಯನ್ನು ಬಳಸಿಕೊಳ್ಳಬಹುದು. ಹಾಗೂ ಡೇಟಾ ಸಂಗ್ರಹಿಸಲು ವಿದ್ಯಾರ್ಥಿಗಳನ್ನು ಸ್ಟೈಫಂಡ್ ಆಧಾರದ ಮೇಲೆ ನಿಯೋಜಿಯಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಈ ರೀತಿಯ ಕ್ರಮ ತೆಗೆದುಕೊಳ್ಳುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯವಾಗಲಿದೆ ಎಂದರು.
ಮಾಲಿನ್ಯವನ್ನು ತಡೆಗಟ್ಟಲು ಹೊಸ ನೀತಿಯನ್ನು ತರಲು, ವಿಶೇಷವಾಗಿ ನಗರಗಳಲ್ಲಿ ವಾಹನ ಚಾಲಕರಿಂದ ಅನಗತ್ಯ ಹಾರ್ನ ನಿಂದಾಗಿ ಅತಿರೇಕವಾಗಿರುವ ಶಬ್ದಮಾಲಿನ್ಯ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ 15 ದಿನಗಳಲ್ಲಿ ಎಲ್ಲಾ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳ ಸಭೆಯನ್ನು ನಡೆಸುವುದಾಗಿ ಗಡ್ಕರಿ ಹೇಳಿದ್ದಾರೆ.
ಒಂದು ಕೋಟಿ ಜನರು ಹಲವು ವರ್ಷಗಳ ಕಾಲ ತಮ್ಮ ಕೈಯಿಂದ ಸೈಕಲ್ ರಿಕ್ಷಾಗಳಲ್ಲಿ ಜನರನ್ನು ಸಾಗಿಸುವ ಅಮಾನವೀಯ ವೃತ್ತಿಯಲ್ಲಿ ತೊಡಗಿದ್ದರು. ಅವರಲ್ಲಿ 70 ಲಕ್ಷ ಮಂದಿ ಯಾಂತ್ರೀಕೃತ ಇ-ರಿಕ್ಷಾ ಮತ್ತು ಇ-ಕಾರ್ಟ್‌ಗಳಿಗೆ ಬದಲಾಗಿದ್ದಾರೆ. ಇದು ನನ್ನ ಜೀವನದ ಶ್ರೇಷ್ಠ ಸಾಧನೆಯಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


