ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 299 ಸೇರಿ ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, ಒಬ್ಬರು ಸಾವು
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,58,178ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,58,178ಕ್ಕೆ ಏರಿಕೆಯಾಗಿದೆ.
ಇಂದು 478 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸೋಂಕಿನಿಂದ ಒಟ್ಟಾರೇ ಗುಣಮುಖರಾದವರ ಸಂಖ್ಯೆ 40,13,541ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 4,379 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 299 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 18,68,378 ಆಗಿದೆ. 293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 18,48,656 ಆಗಿದೆ. ಸದ್ಯ 2,739 ಸಕ್ರಿಯ ಪ್ರಕರಣಗಳಿವೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಬಳ್ಳಾರಿಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 40,216ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


