ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಈ ಬಾರಿ ದಸರಾ ಯಾರು ಉದ್ಘಾಟನೆ ಮಾಡಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಮೈಸೂರು ದರಸಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ.
ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ನಾಯಕರನ್ನೊಳಗೊಂಡ ಸಮಿತಿ ಹಲವು ಸುತ್ತಿನ ಸಭೆ ನಡೆಸಿದೆ. ಕೊರೋನಾ ಕಾರಣ ಕಳೆದ ವರ್ಷ ಸರಳ ದಸರಾ ಆಚರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


