34 ಅಡಿ ಎತ್ತರದ ಗಣಪತಿ ವಿಸರ್ಜನೆ ವೇಳೆ ದುರಂತ: ಓರ್ವ ಸಾವು, ಮತ್ತೊಬ್ಬನಿಗೆ ಗಾಯ, ಯುವಕನ ಬರ್ಬರ ಹತ್ಯೆ
ಗಣೇಶ ಮೂರ್ತಿ ವಿರ್ಸಜನೆ ವೇಳೆ ಗಣೇಶ ಮೂರ್ತಿ ಸಮೇತ ಕಾಲುವೆಗೆ ಕ್ರೇನ್ ಪಲ್ಟಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟು, ಇನ್ನೊಬ್ಬನಿಗೆ ಗಂಭೀರ ಗಾಯವಾಗಿರುವಂತ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಟಿಬಿ ಡ್ಯಾಂನ ಹೊರವಲಯದ ಕಾಲುವೆಯ ಬಳಿ ಮಧ್ಯರಾತ್ರಿ 1.25 ರ ಸುಮಾರಿಗೆ ನಡೆದಿದೆ.

ವಿಜಯನಗರ: ಗಣೇಶ ಮೂರ್ತಿ ವಿರ್ಸಜನೆ ವೇಳೆ ಗಣೇಶ ಮೂರ್ತಿ ಸಮೇತ ಕಾಲುವೆಗೆ ಕ್ರೇನ್ ಪಲ್ಟಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟು, ಇನ್ನೊಬ್ಬನಿಗೆ ಗಂಭೀರ ಗಾಯವಾಗಿರುವಂತ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಟಿಬಿ ಡ್ಯಾಂನ ಹೊರವಲಯದ ಕಾಲುವೆಯ ಬಳಿ ಮಧ್ಯರಾತ್ರಿ 1.25 ರ ಸುಮಾರಿಗೆ ನಡೆದಿದೆ.
18 ವರ್ಷದ ಯುವಕ ಅಶೋಕ್ ಮೃತಪಟ್ಟ ದುರ್ದೈವಿಯಾಗಿದ್ದು, ಸಾಯಿ ನಿಖಿಲ್ ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳು ಸಾಯಿ ನಿಖಿಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕ್ರೇನ್ನಿಂದ ಮೃತದೇಹ ಮತ್ತು ಗಾಯಾಳುಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.
ಮೃತಪಟ್ಟ ಯುವಕ ಮತ್ತು ಗಾಯಾಳು ಟಿಬಿ ಡ್ಯಾಂ ಕ್ಯಾಂಪ್ ನಿವಾಸಿಗಳು. ವಿಜಯನಗರ ಜಿಲ್ಲೆಯ ಟಿಬಿ ಡ್ಯಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ಸಾವು, ನಾಲ್ವರ ಬಂಧನ: ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಅರ್ಜುನಗೌಡ ಪಾಟೀಲ್(20) ಹತ್ಯೆಗೊಳಗಾದ ವ್ಯಕ್ತಿ. ಅರ್ಜುನ್ ಗೌಡನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ನಾಲ್ಕು ಜನರನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


