ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಅತಿಥಿ ಉಪನ್ಯಾಸಕನ ಬಂಧನ, ಬಂಧಿತರ ಸಂಖ್ಯೆ 18ಕ್ಕೆ ಏರಿಕೆ
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದ್ದು, ಆ ಮೂಲಕ ಬಂಧಿತರ ಸಂಖ್ಯೆ 18ಕ್ಕೇರಿಕೆಯಾಗಿದೆ.

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದ್ದು, ಆ ಮೂಲಕ ಬಂಧಿತರ ಸಂಖ್ಯೆ 18ಕ್ಕೇರಿಕೆಯಾಗಿದೆ.
ಬೆಳಗಾವಿಯಲ್ಲಿ ಪೊಲೀಸರು ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ್ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: KPTCL ನೇಮಕಾತಿ ಅಕ್ರಮ: ಮತ್ತೋರ್ವನ ಬಂಧನ
ಈಗಾಗಲೇ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಕಿಂಗ್ ಪಿನ್ ಸಂಜು ಭಂಡಾರಿ, ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದ ಮಹಮ್ಮದ್ ಸೇರಿ 18 ಜನ ಆರೋಪಿಗಳನ್ನ ಬಂಧಿಸಿದ್ದಾರೆ.
ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


