3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅಗತ್ಯ ಮಾನವ ಸಂಪನ್ಮೂಲದ ಮೂಲಕ ಪೊಲೀಸ್ ಇಲಾಖೆಯನ್ನು ಬಲಪಡಿಸುವಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದ್ದು, ಹೊಸದಾಗಿ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ) 2,996 ಹುದ್ದೆಗಳು, ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ತೃತೀಯ ಲಿಂಗಿ) ಸೇರಿದಂತೆ ಒಟ್ಟು 3,064 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


