ಜಮ್ಮು- ಕಾಶ್ಮೀರ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ: ಬೆಂಗಳೂರಿನ 36 ಕಡೆ ಸಿಬಿಐ ದಾಳಿ, ಪರಿಶೀಲನೆ
ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮಂಗಳವಾರ ಬೆಂಗಳೂರಿನ ಕೆಲವು ಸೇರಿದಂತೆ 36 ಸ್ಥಳಗಳಲ್ಲಿ ಶೋಧ ನಡೆಸಿದೆ.

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಮಂಗಳವಾರ ಬೆಂಗಳೂರಿನ ಕೆಲವು ಸೇರಿದಂತೆ 36 ಸ್ಥಳಗಳಲ್ಲಿ ಶೋಧ ನಡೆಸಿದೆ.
ಇನ್‌ಸ್ಪೆಕ್ಟರ್ (SI) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು, ಶ್ರೀನಗರ, ಕರ್ನಾಲ್, ಮಹೇಂದರ್‌ಗಢ, ಹರಿಯಾಣದ ರೇವಾರಿ, ಗುಜರಾತ್‌ನ ಗಾಂಧಿನಗರ, ಉತ್ತರ ಪ್ರದೇಶದ ಗಾಜಿಯಾಬಾದ್, ಕರ್ನಾಟಕದ ಬೆಂಗಳೂರು ಮತ್ತು ದೆಹಲಿ ಸೇರಿದಂತೆ ದೇಶದಾದ್ಯಂತ ಸುಮಾರು 36 ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.
ಪರಿಶೀಲನೆ ವೇಳೆ ಕೆಲವು ತಿದ್ದುಪಡಿ ಮಾಡಿದ ದಾಖಲೆಗಳು, ಡಿಜಿಟಲ್ ಪುರಾವೆಗಳು ದೊರೆತಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ, ಸಿಬಿಐ ತನಿಖೆಯ ಸಂದರ್ಭದಲ್ಲಿ, ಬೆಂಗಳೂರಿನ ಕೋಚಿಂಗ್ ಸೆಂಟರ್‌ನ ಮಾಲೀಕ, ಮಾರ್ಚ್ 27, 2022 ರಂದು ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳಲ್ಲಿ ಕೆಲವು ವ್ಯಕ್ತಿಗಳು ಭಾಗಿಯಾಗಿರುವುದು ಕಂಡುಬಂದಿದೆ.
ಜೂನ್ 4, 2022 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಜೆಕೆಎಸ್‌ಎಸ್‌ಬಿ ಅಧಿಕಾರಿಗಳ ಪಿತೂರಿ ನಡೆಸರುವ ಪ್ರಕರಣವನ್ನು ಪರಿಶೀಲಿಸಲು ಜೆ & ಕೆ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿತ್ತು. ಜಮ್ಮು, ರಜೌರಿ ಮತ್ತು ಸಾಂಬಾ ಜಿಲ್ಲೆಗಳಿಂದ ಅಸಹಜವಾಗಿ ಹೆಚ್ಚಿನ ಶೇಕಡಾವಾರು ಆಯ್ಕೆಯಾಗಿದೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


