ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.

ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.
ಮುರುಘಾಮಠದ ವಿಚಾರದ ಬಗ್ಗೆ ಉಲ್ಲೇಖಿಸಿದ್ದು ಸದ್ಯ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೂಡಲೇ ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.
ಮಠದ ದೈನಂದಿನ ವ್ಯವಹಾರ ಸುಗಮವಾಗಿ ನಡೆಯಬೇಕು. ಸದ್ಯ ಮೇಲುಸ್ತುವಾರಿ ಸಮಿತಿ ರಚನೆಯಾಗಬೇಕು. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಿ. ಸುಪ್ರೀಂಕೋರ್ಟ್ ,ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚಿಸಬೇಕು. ಶ್ರೀಗಳ ನ್ಯಾಯಾಂಗ ಬಂಧನ ಅಪಮಾನ. ಇದರಿಂದ ಇಡೀ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ. ಹೀಗಾಗಿ ಶ್ರೀಗಳೇ ಪೀಠ ತ್ಯಾಗ ಮಾಡಬೇಕು ಎಂದಿದ್ದಾರೆ.
ಇಲ್ಲವೇ ಮಠದ ಭಕ್ತರು ಪೀಠದಿಂದ ಪದಚ್ಯುತಗೊಳಿಸಬೇಕು. ಮಠದ ಆಡಳಿತ ಸಂಪೂರ್ಣ ಅಸ್ತವ್ಯಸ್ಥವಾಗಿದೆ.ಕಾರ್ಯದರ್ಶಿ ವಸ್ತ್ರದ ಶ್ರೀಗಳಿಂದ ಏಕಪಕ್ಷೀಯವಾಗಿ ನೇಮಕಗೊಂಡಿದ್ದಾರೆ.ಇವರ ವಿರುದ್ಧ ಭಕ್ತರು ಅಸಮಾಧಾನಗೊಂಡಿದ್ದಾರೆ.ಕೂಡಲೇ ಮೇಲುಸ್ತುವಾರಿ ಸಮಿತಿ ರಚನೆ ಮಾಡಿ ಎಂದು ಹೈಕೋರ್ಟ್ ಸಿಜೆಗೆ ಮನವಿಪತ್ರದಲ್ಲಿ ಶಾಸಕ ಬಸವರಾಜ ಯತ್ನಾಳ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


