ಬೆಂಗಳೂರು: ಮಲ್ಲೇಶ್ವರಂನಲ್ಲಿ 'ಸೀರೆ ಉಟ್ಟ ನಾರಿಯರ ಓಟ': ಸಚಿವ ಡಾ. ಅಶ್ವತ್ಥ ನಾರಾಯಣ ಚಾಲನೆ
ಜಯನಗರ ಜಾಗ್ವಾರ್ಸ್ ಸಂಸ್ಥೆ ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿಲೋ ಮೀಟರ್ ಉದ್ದದ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆಗೆ ಕ್ಷೇತ್ರದ ಶಾಸಕರು ಆಗಿರುವ ಉನ್ನತ ಏಗಕಿಂಳ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು.

ಬೆಂಗಳೂರು: ಜಯನಗರ ಜಾಗ್ವಾರ್ಸ್ ಸಂಸ್ಥೆ ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿಲೋ ಮೀಟರ್ ಉದ್ದದ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆಗೆ ಕ್ಷೇತ್ರದ ಶಾಸಕರು ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು. 18ನೇ ಅಡ್ಡರಸ್ತೆಯ ಮೈದಾನದಿಂದ ಆರಂಭವಾದ ಈ ಸ್ಪರ್ಧೆಯಲ್ಲಿ ಸಾವಿರಾರು ನಾರಿಯರು ಉತ್ಸಾಹದಿಂದ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆರೋಗ್ಯದ ಗುಟ್ಟನ್ನು ಅರಿತರೆ ಬದುಕಿನ ಗುಟ್ಟನ್ನೇ ತಿಳಿಯಬಹುದು. ದೇಶಿ ಉಡುಪಿನಲ್ಲೂ ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸಬಹುದು.ಇಂತಹ ಚಟುವಟಿಕೆಗಳಿಂದ ಮಹಿಳೆಯರಿಗೂ ಖುಷಿ ಸಿಗುತ್ತದೆ ಎಂದು ಅವರು ತಿಳಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣ ಮತ್ತು ಯೋಗಕ್ಷೇಮಕ್ಕೂ ಆದ್ಯತೆ ನೀಡಲಾಗಿದೆ. ಸದೃಢ ಆರೋಗ್ಯದಿಂದ ಸದೃಢ ಭಾರತ ನಿರ್ಮಿಸಬಹುದು ಎಂದು ಅವರು ನುಡಿದರು. ಆದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


