ಸಿಎಂ ಮನೆ ಮುಂದೆ ಪ್ರತಿಭಟನೆ: 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ವ್ಯವಸ್ಥೆ ಎಂದ ಬೊಮ್ಮಾಯಿ
ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ವಿಶ್ವ ಶಾಂತಿ ದಿನ. ಪ್ರೀತಿ, ಶಾಂತಿ ಮತ್ತು ಸೌಹಾರ್ದಯುತವಾಗಿ ಬದುಕುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸೋಣ. ಈ ಮೂಲಕ ಸದೃಢ ಹಾಗೂ ಸಮರ್ಥ ದೇಶವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಆಶಿಸಿದ್ದಾರೆ.
ಇದಕ್ಕೂ ಮುನ್ನ ಆರ್ ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ನಿವಾಸ ಮುಂದೆ ಪೌರ ಕಾರ್ಮಿಕರು ಖಾಯಮಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದು 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶ ಸರ್ಕಾರಕ್ಕಿದೆ. ಆದರೆ ಸರ್ಕಾರ 1 ಸಾವಿರ ಕಾರ್ಮಿಕರನ್ನು ಮಾತ್ರ ಖಾಯಂ ಮಾಡಲಾಗುತ್ತಿದೆ. ಉಳಿದ 7 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಸಿಎಂ ಬೊಮ್ಮಾಯಿ ಎದುರೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಪೌರ ಕಾರ್ಮಿಕರಿಗೆ ಅನ್ಯಾಯವಾಗಿದ್ದು ಮುಖ್ಯಮಂತ್ರಿಗಳು ಗೆಜೆಟ್ ನೊಟಿಫಿಕೇಶನ್ ಆಗುವುದರೊಳಗೆ ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


