ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯ ಪ್ರವಾಸ, ನಾಳೆ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.
ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ, ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಲಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಹೆಚ್ ಎಎಲ್ ನ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ದಕ್ಷಿಣ ವಲಯ ವೈರಾಣು ಸಂಸ್ಥೆಗೆ ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಂದೇ ಸೆಂಟ್ ಜೋಸೆಫ್ ವಿವಿ ಸಮಾರಂಭ ಹಾಗೂ ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ.
ಸೆಪ್ಟೆಂಬರ್ 28 ರಂದು ರಾಷ್ಟ್ರಪತಿ ನವದೆಹಲಿಗೆ ವಾಪಸ್ಸಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


