ಬೀದರ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಜಲಸಮಾಧಿ!
ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಂಗಟಿ ಗ್ರಾಮದಲ್ಲಿ ನಡೆದಿದೆ.

ಬೀದರ್: ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಂಗಟಿ ಗ್ರಾಮದಲ್ಲಿ ನಡೆದಿದೆ.
ಮೃತರು 32 ವರ್ಷದ ಸುನೀತಾ, ಪುತ್ರ 12 ವರ್ಷದ ನಾಗಶೆಟ್ಟಿ, 33 ವರ್ಷದ ಆನಂದಾ ಹಾಗೂ 14 ವರ್ಷ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುನೀತಾ ಹಾಗೂ ಆನಂದಾ ಅವರು ಬಟ್ಟೆ ತೊಳೆಯಲು ಹೋದಾಗ ಮಕ್ಕಳು ಈಜಲು ನೀರಿಗೆ ಇಳಿದಿದ್ದರು. ಈ ವೇಳೆ ಅವರು ಕೆರೆಯಲ್ಲಿನ ಕೆಸರಿನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಮೇಲಕ್ಕೆತ್ತಲು ಹೋದ ತಾಯಂದಿರೂ ಸಹ ನೀರು ಪಾಲಾಗಿದ್ದಾರೆ.
ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


