ರಾಜ್ಯ

ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಅಲೆಯುತ್ತಿದ್ದ ಪತ್ನಿ ಮನನೊಂದು ಆತ್ಮಹತ್ಯೆ!

ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಅಲೆಯುತ್ತಿದ್ದ ದೀಪಕ್ ಪತ್ನಿ ಪುಷ್ಫಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಅಲೆಯುತ್ತಿದ್ದ ಪತ್ನಿ ಮನನೊಂದು ಆತ್ಮಹತ್ಯೆ!
ಸಂಗ್ರಹ ಚಿತ್ರ
Published On :

ಹುಬ್ಬಳ್ಳಿ: ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಅಲೆಯುತ್ತಿದ್ದ ದೀಪಕ್ ಪತ್ನಿ ಪುಷ್ಫಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ವಾರವಷ್ಟೇ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿತ್ತು. ಈ ಮಧ್ಯೆ ಪತಿಯ ಸಾವಿಗೆ ನ್ಯಾಯಕ್ಕಾಗಿ ಪುಷ್ಪಾ ಹೋರಾಡುತ್ತಿದ್ದರು. ಆದರೆ ಇಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನವನಗರದ ಸಂಬಂಧಿ ಮನೆಯಲ್ಲಿ ಪುಷ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಜುಲೈ 4ರಂದು ರಾಯನಾಳ ಬಳಿ ದೀಪಕ್ ಪಠದಾರಿ ಹತ್ಯೆ ಮಾಡಲಾಗಿತ್ತು. ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. 

ಕೊಲೆ ನಡೆದ ಮೂರು ತಿಂಗಳ ಬಳಿಕ ಆಡಿಯೋವೊಂದು ಹೊರಬಿದ್ದಿದ್ದು ಈ ಆಡಿಯೋ ಪೊಲೀಸರ ವಿರುದ್ಧವೇ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕುವಂತೆ ಮಾಡಿತ್ತು. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.