ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆತ್ಮೀಯ ಬೀಳ್ಕೊಡುಗೆ
ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಬೆಳ್ಳಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಬೆಳ್ಳಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.
ಮೈಸೂರು ದಸರಾ, ಧಾರಾವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಅಂಡ್ ಟೆಕ್ನಾಲಜಿಯನ್ನು ಉದ್ಘಾಟಿಸಿದರು ಹಾಗೂ ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದರು.
ಬೆಂಗಳೂರಿನ ಹೆಚ್.ಎ.ಎಲ್ ನಲ್ಲಿ ಕ್ರಯೋಜನಿಕ್ ಪ್ರತ್ಯೇಕ ಘಟಕ ಹಾಗೂ ವರ್ಚುವಲ್ ಕಾರ್ಯಕ್ರಮದ ಮೂಲಕ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದ ದಕ್ಷಿಣವಲಯ ಸಂಶೋಧನಾ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಗರದ ನೂತನ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ಸಹ ಉದ್ಘಾಟಿಸಿದರು.
ಸೆಪ್ಟೆಂಬರ್ ೨೭ ರಂದು ರಾಜ್ಯ ಸರ್ಕಾರದಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿದ ರಾಷ್ಟ್ರಪತಿ ಅವರಿಗೆ ಅಂದು ರಾತ್ರಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ಸಹ ಏರ್ಪಡಿಸಲಾಗಿತ್ತು. ಕಳೆದ ಮೂರು ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರಪತಿಗಳು ರಾಜ್ಯ ಪ್ರವಾಸ ಮುಗಿಸಿ ಇಂದು ನವದೆಹಲಿಗೆ ಪ್ರಯಾಣಿಸಿದರು.
ಈ ಸಮಯದಲ್ಲಿ ಬೃಹತ್ ಕೈಗಾರಿಕಾ ಸಚಿವರಾದ ಮುರಗೇಶ್ ನಿರಾಣಿ , ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಭೂ ಸೇನಾ ಅಧಿಕಾರಿ ಬಸಂತ್ ರೆಪ್ಸ್ ಪಾಲ್, ನೌಕಾ ಸೇನಾಧಿಕಾರಿ ರೂಪನ್ ಬೆಂಬೇ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


