ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 2042 ಹೊಸ ಸೋಂಕು ಪ್ರಕರಣಗಳು ವರದಿ, 2 ಸಾವು!

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 2042 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 2042 ಹೊಸ ಸೋಂಕು ಪ್ರಕರಣಗಳು ವರದಿ, 2 ಸಾವು!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 2042 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2042 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,16,556ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬೆಂಗಳೂರು ಮತ್ತು ಕೋಲಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40113ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1039 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,42,299 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,704ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,64,998ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,403ಕ್ಕೆ ಏರಿಕೆಯಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.