ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 1,694 ಹೊಸ ಪ್ರಕರಣ ಪತ್ತೆ, 1 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ. 1,741 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸದ್ಯ 11,355 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನಿಂದ ಒಬ್ಬರು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 40,114ಕ್ಕೆ ಏರಿಕೆಯಾಗಿದೆ. ಇಂದು 28, 118 ಪರೀಕ್ಷೆ ನಡೆಸುವುದರೊಂದಿಗೆ ಒಟ್ಟಾರೇ 6,79,95,010 ಟೆಸ್ಟ್ ನಡೆಸಲಾಗಿದೆ.
ಬೆಂಗಳೂರು ನಗರದಲ್ಲಿ 1,105 ಹೊಸ ಪ್ರಕರಣ ಪತ್ತೆಯಾಗಿದ್ದು, 1,347 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ, 8,096 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


