ರಾಜ್ಯ

ಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳಲು ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕೆ ಉಚಿತ ಮೆಟ್ರೋ ವ್ಯವಸ್ಥೆ: ಡಿ ಕೆ ಶಿವಕುಮಾರ್ 

ದೇಶದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಪ್ರಯುಕ್ತ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕಾಗಿ ಉಚಿತ ಮೆಟ್ರೊ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ.

ಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳಲು ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕೆ ಉಚಿತ ಮೆಟ್ರೋ ವ್ಯವಸ್ಥೆ: ಡಿ ಕೆ ಶಿವಕುಮಾರ್ 
ಮೆಟ್ರೊ ರೈಲು ನಿಲ್ದಾಣದಲ್ಲಿ ಡಿ ಕೆ ಶಿವಕುಾಮಾರ್
Published On :

ಬೆಂಗಳೂರು: ದೇಶದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಪ್ರಯುಕ್ತ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕಾಗಿ ಉಚಿತ ಮೆಟ್ರೊ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ. 

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಾಳೆ ಸಂಚಾರ ದಟ್ಟಣೆ ಸಮಸ್ಯೆಯುಂಟಾಗಬಾರದು, ಸ್ವಾತಂತ್ರ್ಯ ನಡಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರೋತ್ಸಾಹಿಸುವಂತೆ ಮೆಟ್ರೊ ರೈಲಿನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿ ಮೆಟ್ರೊ ರೈಲಿನಿಂದ ಹತ್ತಿಸಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಟ್ಟು ನಂತರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರಯಾಣಿಕರು ಮನೆಗೆ ಹೋಗಲು ಇಳಿಯಬೇಕಾದ ನಿಲ್ದಾಣಕ್ಕೆ ಮೆಟ್ರೊದಲ್ಲಿ ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.