ರಾಜ್ಯ

'ಪ್ಲಾಸ್ಟರ್ ಆಫ್ ಪ್ಯಾರಿಸ್' ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ: ಬಿಬಿಎಂಪಿ

ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

'ಪ್ಲಾಸ್ಟರ್ ಆಫ್ ಪ್ಯಾರಿಸ್' ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ: ಬಿಬಿಎಂಪಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಗಣೇಶ ಹಬ್ಬದ ಆಚರಣೆಗೆ ಇನ್ನೊಂದೇ ತಿಂಗಳು ಬಾಕಿ ಉಳಿದಿದೆ. ಈ ಬಾರಿ ಪಿಒಪಿ ಗಣೇಶನ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕೆಂದು ಎಲ್ಲಾ ವಲಯ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವುದಕ್ಕೆ ಮಾತ್ರ ಬಿಬಿಎಂಪಿ ಅನುಮತಿ ನೀಡಿದೆ.

ಬಿಬಿಎಂಪಿ, ಪೊಲೀಸ್ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿಗಳ ತಂಡ ಯಾವ ಏರಿಯಾದಲ್ಲಿಯಾದರೂ ಪಿಒಪಿ, ಥರ್ಮೊಕೋಲ್ ಮತ್ತು ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಗಣೇಶನ ಮೂರ್ತಿಗಳನ್ನು ತಯಾರಿಸಿದ್ದಾರೆಯೇ ಎಂದು ತಪಾಸಣೆ ಮಾಡಲು ಭೇಟಿ ನೀಡುತ್ತಾರೆ. ಮಳಿಗೆಗಳು ಅಥವಾ ಉತ್ಪಾದಕ ಘಟಕಗಳು ನಿಯಮ ಉಲ್ಲಂಘಿಸುವುದು ಕಂಡುಬಂದರೆ ಅಧಿಕಾರಿಗಳು ನೊಟೀಸ್ ಜಾರಿ ಮಾಡುತ್ತಾರೆ. ಪಿಒಪಿ ಗಣೇಶ ಮೂರ್ತಿಗಳಿಗೆ ಇಂತಹ ನಿಷೇಧಕಾರಿ ವಸ್ತುಗಳ ಬಳಕೆ ಮಾಡುವವರ ವಿರುದ್ಧ ಕೂಡ ಕೇಸು ದಾಖಲಿಸಲಾಗುವುದು ಎಂದರು.

ವಿಗ್ರಹ ತಯಾರಕರು ಜೇಡಿಮಣ್ಣನ್ನು ಬಳಸಬೇಕು ಮತ್ತು ಅದರ ಬಳಕೆಗೆ ಉತ್ತೇಜಿಸಲಾಗುವುದು ಎಂದು ಆಯುಕ್ತರು ಹೇಳಿದರು. ಕೆರೆಗಳ ಮಾಲಿನ್ಯ ತಪ್ಪಿಸಲು ಬಿಬಿಎಂಪಿ ಅಧಿಕಾರಿಗಳು ಗಣೇಶನ ವಿಗ್ರಹಗಳನ್ನು ಬಿಡಲು ಕಲ್ಯಾಣಿಗೆ ವ್ಯವಸ್ಥೆ ಮಾಡಲಿದ್ದಾರೆ. ಉತ್ಸವಕ್ಕಾಗಿ 63 ಉಪವಿಭಾಗಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ವಲಯ ಆಯುಕ್ತರಿಗೆ ಸ್ಥಾಯಿ ಸೂಚನೆಗಳನ್ನು ನೀಡಲಾಗಿದೆ, ಅವರು ಅನುಮತಿ, ಮುಳುಗುವಿಕೆ ಮತ್ತು ಇತರ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿದರು.

Story image

ಈ ಮಧ್ಯೆ, ಈ ಬಾರಿಯ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಎಲ್ಲಾ ನಗರ ಪಾಲಿಕೆಗಳು ಮತ್ತು ಪುರಸಭೆಗಳು ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರ ಕೂಡ ಸುತ್ತೋಲೆ ಹೊರಡಿಸಿದೆ. ವಿಗ್ರಹಗಳು ಮತ್ತು ಗಣೇಶ ಮೂರ್ತಿಯ ಪೆಂಡಾಲ್ ಗಳನ್ನು ಇಡಲು ಬಯಸುವ ಜನರು ಮತ್ತು ಸಮುದಾಯಗಳು ಸಂಬಂಧಪಟ್ಟ ಅಧಿಕಾರಿಗಳಿಂದ NOC ಗಳನ್ನು ಪಡೆಯಬೇಕು. ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಶಿಷ್ಟಾಚಾರ ಪ್ರಕಾರ ಗಣೇಶನ ಮೂರ್ತಿಗಳ ವಿಸರ್ಜನೆ  ಮಾಡಲಾಗುತ್ತದೆ. ಸಂಚಾರ ದಟ್ಟಣೆ ತಪ್ಪಿಸಲು ಸಾಕಷ್ಟು ವಿಸರ್ಜನೆ ಟ್ಯಾಂಕ್‌ಗಳನ್ನು ನಿಯೋಜಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.