ಬೆಳಗಾವಿ: ಆನೆಗಳ ಆಹಾರಕ್ಕಾಗಿ ರೈತರ ಕಬ್ಬು ಕದಿಯುತ್ತಿರುವ ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು!
ಗಜಪಡೆಗಳ ಹೊಟ್ಟೆ ತುಂಬಲು ಅರಣ್ಯ ಇಲಾಖೆ ಸಿಬ್ಬಂದಿ ರೈತರು ಬೆಳೆದ ಕಬ್ಬಿನ ಬೆಳೆಯನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ಮುಂಜಾನೆ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಕಬ್ಬು ರೈತರೊಬ್ಬರ ಹೊಲಕ್ಕೆ ನುಗ್ಗಿ 5 ಕ್ವಿಂಟಾಲ್ನಷ್ಟು ಬೆಳೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೈತರು ದೂರಿದ್ದಾರೆ

ಬೆಳಗಾವಿ: ಚಿರತೆ ಶೋಧಕ್ಕೆ ಬೆಳಗಾವಿಗೆ ಬಂದಿರುವ ಗಜಪಡೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಬ್ಬು ಕಳ್ಳತನ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಗಾಲ್ಫ್ ಕ್ಲಬ್ ಮೈದಾನದಲ್ಲಿ ಅವಿತುಕೊಂಡು ಪ್ರತಿದಿನವೂ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆ ಹಿಡಿಯಲು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ನಿಂದ ಎರಡು ಆನೆಗಳನ್ನು ತರಲಾಗಿದೆ. ಗಜಪಡೆಗಳ ಹೊಟ್ಟೆ ತುಂಬಲು ಅರಣ್ಯ ಇಲಾಖೆ ಸಿಬ್ಬಂದಿ ರೈತರು ಬೆಳೆದ ಕಬ್ಬಿನ ಬೆಳೆಯನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಬುಧವಾರ ಮುಂಜಾನೆ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಕಬ್ಬು ರೈತರೊಬ್ಬರ ಹೊಲಕ್ಕೆ ನುಗ್ಗಿ 5 ಕ್ವಿಂಟಾಲ್ನಷ್ಟು ಬೆಳೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೈತರು ದೂರಿದ್ದಾರೆ. ಬೆಳಗ್ಗೆ ತಮ್ಮ ಹೊಲಕ್ಕೆ ಭೇಟಿ ನೀಡಿದಾಗ ರೈತ ರಾಜು ಕಣಬರ್ಕರ್ ಅವರಿಗೆ ವಿಷಯ ತಿಳಿದಿದೆ. ಅರಣ್ಯಾದಿಕಾರಿಗಳು ಸಂಪೂರ್ಣವಾಗಿ ಬೆಳೆದ ಕಬ್ಬನ್ನು ಕತ್ತರಿಸಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು. ನಂತರ ಇತರ ಗ್ರಾಮಸ್ಥರನ್ನು ಒಟ್ಟುಗೂಡಿಸಿ, ಆನೆಗಳಿರುವ ಗಾಲ್ಫ್ ಮೈದಾನಕ್ಕೆ ತೆರಳಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.
ಮೊದಲು ಅರಣ್ಯಾಧಿಕಾರಿಗಳು ಆರೋಪಗಳನ್ನು ನಿರಾಕರಿಸಿದರು, ಆದರೆ ನಂತರ ಪರಿಹಾರ ನೀಡಲು ಒಪ್ಪಿಕೊಂಡರು ಎಂದು ರಾಜು ಹೇಳಿದ್ದಾರೆ. ಕಣಬರ್ಕರ್ಗೆ ಪರಿಹಾರ ನೀಡುವ ಮೊದಲು ಆಗಿರುವ ನಷ್ಟವನ್ನು ನಿರ್ಣಯಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


