ಚಿತ್ರದುರ್ಗ: ಕಾರು-ಲಾರಿ ನಡುವೆ ಡಿಕ್ಕಿ; ಮೂವರ ದುರ್ಮರಣ
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಜಾಜಿನಗರ ಮನೀಷ್, ಪತ್ನಿ ಸಿಂಚನಾ ಹಾಗೂ ಸಹೋದರಿ ಭೂಮಿಕಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಗಿರಿಧರ್, ಆಶಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ಐವರು ತೆರಳುತ್ತಿದ್ದರು. ಸೀಬಾರ ಸಮೀಪ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಗುದ್ದಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಗುದ್ದಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


