ರಾಮನಗರ: ಮಳೆ ಆರ್ಭಟಕ್ಕೆ ಆಲದ ಮರ ಉರುಳಿ ಬಿದ್ದು ವ್ಯಕ್ತಿ ಸಾವು
ರಾಮನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಎರಡು ದಶಕಗಳಲ್ಲಿಯೇ ಈ ಬಾರಿ ಅತ್ಯಧಿಕ ಮಳೆಯಾಗಿದ್ದು, ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದೆ.

ರಾಮನಗರ: ರಾಮನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಎರಡು ದಶಕಗಳಲ್ಲಿಯೇ ಈ ಬಾರಿ ಅತ್ಯಧಿಕ ಮಳೆಯಾಗಿದ್ದು, ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದೆ.
ಮಳೆ ಆರ್ಭಟಕ್ಕೆ ಇಂದು ಬಿಡದಿ ಬಳಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಆಲದ ಮರ ಉರುಳಿ ಬಿದ್ದು ತೊರೆದೊಡ್ಡಿ ಗ್ರಾಮದ ಬೋರೇಗೌಡ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅನಾಹುತಗಳ ಸಂಖ್ಯೆ ಮುಂದುವರೆದಿದ್ದು, ಚನ್ನಪಟ್ಟಣದ ಬಳಿ ಹಸುವೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಇನ್ನೂ ಬೆಂಗಳೂರು- ಮೈಸೂರು ರಸ್ತೆ ಜಲಾವೃತಗೊಂಡು, ವಾಹನಗಳು ನೀರಿನಲ್ಲಿ ಸಿಲುಕಿವೆ.
ಅವುಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಮನಗರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಕೂಡಾ ತೆರಳುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


