ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.
ಲೈಂಗಿಕ ದೌರ್ಜನ್ಯ ಎಸಗಿದ ಶ್ರೀಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು. ಈ ವೇಳೆ ಮುರುಘಾ ಶ್ರೀಗಳ ವಿರುದ್ಧ ಘೋಷಣೆ ಕೂಗಿದರು.
ಅತ್ಯಾಚಾರ ಪ್ರಕರಣದಲ್ಲಿ ಸಾಮಾನ್ಯ ವ್ಯಕ್ತಿಯೊಬ್ಬ ಆರೋಪಿಯಾಗಿದ್ದರೆ, ಪೊಲೀಸರು ಅವರನ್ನು ಒಂದು ದಿನವೂ ಹೊರಗೆ ಬಿಡುತ್ತಿರಲಿಲ್ಲ. ತಕ್ಷಣ ಬಂಧಿಸುತ್ತಿದ್ದರು. ಆದರೆ ಈ ಸ್ವಾಮೀಜಿ ಪ್ರಭಾವಿ ಎಂಬ ಕಾರಣಕ್ಕೆ ಅವರನ್ನು ಇನ್ನೂ ಬಂಧಿಸಿಲ್ಲ, ಅವರನ್ನು ತಕ್ಷಣ ಬಂಧಿಸಬೇಕಿತ್ತು. ಆದರೆ ಇದುವರೆಗೂ ಯಾವುದೇ ಕ್ರಮವಿಲ್ಲ ಎಂದು ದಲಿತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರವಿ ಅವರು ಆರೋಪಿಸಿದರು.
ಸಂತ್ರಸ್ತ ವಿದ್ಯಾರ್ಥಿನಿಯೊಬ್ಬರು ದಲಿತರಾಗಿರುವುದರಿಂದ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ. ಕೂಡಲೇ ಅವರನ್ನು ಬಂಧಿಸದಿದ್ದಲ್ಲಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿವೆ ಎಂದು ಅವರು ಎಚ್ಚರಿಸಿದ್ದಾರೆ.
ಏತನ್ಮಧ್ಯೆ, ಸಂತ್ರಸ್ತ ಇಬ್ಬರು ವಿದ್ಯಾರ್ಥಿನಿಯರು ಇಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ಭದ್ರತೆಯ ನಡುವೆ ಕೆಲವು ಅಧಿಕಾರಿಗಳೊಂದಿಗೆ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ 164 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


