ಬಿಜೆಪಿಗರೇ ನನ್ನನೂ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಿ: ರೌಡಿಶೀಟರ್ ಪಾನಿಪುರಿ ಮಂಜ
ರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್ ಸುನೀಲ್ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಮೈಸೂರು: ರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್ ಸುನೀಲ್ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಗಣೇಶನಗರ ನಿವಾಸಿಯಾಗಿರುವ ಮಂಜು ಅಲಿಯಾಸ್ ಪಾನಿ ಪುರಿ ಮಂಜ ಎಂಬಾತ ಮೇಟಗಳ್ಳಿಯಲ್ಲಿ 1 ಪ್ರಕರಣ ಹಾಗೂ ಉದಯಗಿರಿ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಎಂದು ದಾಖಲಾಗಿರುವ ರೌಡಿಶೀಟರ್ ಜಿಲ್ಲಾ ನ್ಯಾಯಾಲಯದ ಎದುರು ಗಾಂಧಿ ಪ್ರತಿಮೆ ಬಳಿ ಕೇಸರಿ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಿದರು.
ಆದಿಚುಂಚನಗಿರಿ ಮಠದ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ, ಸಿದ್ದಗಂಗಾ ಮಠದ ಮಾಜಿ ಪೀಠಾಧಿಪತಿ ಶಿವಕುಮಾರ ಸ್ವಾಮಿ, ಕನಕದಾಸ, ವಾಲ್ಮೀಕಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹಿಡಿದುಕೊಂಡು ಪಾನಿ ಪುರಿ ಮಂಜ ಅವರು ತಮ್ಮ ಬೇಡಿಕೆಯನ್ನು ಬಿಜೆಪಿ ಮುಂದಿಟ್ಟಿದ್ದಾರೆ. ಬ್ಯಾನರ್‌ನಲ್ಲಿ ಬಿಜೆಪಿಗರೇ ನಾನೊಬ್ಬ ರೌಡಿ ಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ ಎಂದಿದ್ದಾರೆ.
ಬಿಜೆಪಿ ಕಾರ್ಯಕ್ರಮದಲ್ಲಿ ಸಚಿವರು, ಸಂಸದರಿರುವ ವೇದಿಕೆಯಲ್ಲಿಯೇ ರೌಡಿ ಶೀಟರ್‌ಗಳು ಕೂಡ ವೇದಿಕೆ ಹಂಚಿಕೊಳ್ಳುತ್ತಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕೆಸರೆರೆಚಾಟಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


