ರಾಜ್ಯ

ಧಾರವಾಡ: ನವಲಗುಂದದ ಲಾಡ್ಜ್​ನಲ್ಲಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣು!

ಕಳೆದ ಮೂರು ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಯುವ ಜೋಡಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಧಾರವಾಡ: ನವಲಗುಂದದ ಲಾಡ್ಜ್​ನಲ್ಲಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣು!
ಸಂಗ್ರಹ ಚಿತ್ರ
Published On :

ಧಾರವಾಡ: ಕಳೆದ ಮೂರು ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಯುವ ಜೋಡಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 

ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ 22 ವರ್ಷದ ಕುಮಾರ ತಳವಾರ ಹಾಗೂ ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ 18 ವರ್ಷದ ದೀಪಾ ಎತ್ತಿನಗುಡ್ಡ ಇಬ್ಬರು ಪ್ರೀತಿಸುತ್ತಿದ್ದರು. ಈ ಜೋಡಿ ಕಳೆದ ಮೂರು ದಿನಗಳ ಹಿಂದೆ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. ಇನ್ನು ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.