ರಾಜ್ಯ

ಕಾಡಾನೆ ದಾಳಿ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧಾರ; ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಳ

ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕಾಡಾನೆ ದಾಳಿ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧಾರ; ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಳ
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಅಬಕಾರಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆನೆ ದಾಳಿಯಿಂದ ಶಾಶ್ವತ ಅಂಗವಿಕಲತೆಗೆ ಒಳಗಾಗುವವರಿಗೆ ಈಗಿರುವ ₹ 5 ಲಕ್ಷದಿಂದ ₹ 10 ಲಕ್ಷ, ಭಾಗಶಃ ಅಂಗವೈಕಲ್ಯಕ್ಕೆ ₹ 2.5 ಲಕ್ಷದಿಂದ ₹ 5 ಲಕ್ಷ, ದಾಳಿಯಿಂದ ಗಾಯಗೊಂಡವರಿಗೆ ₹  30 ಸಾವಿರದಿಂದ ₹ 60 ಸಾವಿರದವರೆಗೆ ಪರಿಹಾರ ನೀಡಲು ಸಭೆ ನಿರ್ಧರಿಸಿತು.

ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪರಿಹಾರವನ್ನು ₹ 10,000 ದಿಂದ ₹ 20,000 ಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು. ಇದೇ ವೇಳೆ ಶಾಶ್ವತ ಅಂಗವಿಕಲತೆಗೆ ಒಳಗಾದವರಿಗೆ ಮಾಸಿಕ ಪಿಂಚಣಿಯನ್ನು ₹ 2,000 ದಿಂದ ₹ 4,000 ಗಳಿಗೆ ಹೆಚ್ಚಿಸಲಾಗಿದೆ. ಬೆಳೆ ಹಾನಿಗೆ ಪಾವತಿಸಿದ ಮೊತ್ತವೂ ದ್ವಿಗುಣಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಕಲೇಶಪುರ-ಬೇಲೂರು ಪ್ರದೇಶದಲ್ಲಿ ಅನಾಹುತ ಸೃಷ್ಟಿಸುತ್ತಿದ್ದ ಎಂಟು ಆನೆಗಳನ್ನು ಸೆರೆಹಿಡಿಯಲು ಮತ್ತು ಸೆರೆಹಿಡಿದ ಆನೆಗಳ ಮೇಲೆ ನಿಗಾ ವಹಿಸಲು ರೇಡಿಯೋ ಕಾಲರ್ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ 23 ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡಲು ರೇಡಿಯೋ ಕಾಲರ್ ಅಳವಡಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.