ಬೆಂಗಳೂರಿನಲ್ಲಿ ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು, ಸಿಸಿಟಿವಿ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಳೂರು ರಸ್ತೆಯಲ್ಲಿ ಬ್ಯಾಂಕ್ ಆಫ್ ಬರೋಡ ಶಾಖೆಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಡಿ. 10ರಂದು ರಾತ್ರಿ ಕಳ್ಳರು ವಾಹನದಲ್ಲಿ ಬಂದು ಎಟಿಎಂ ಮಿಷನ್ಗೆ ಅಳವಡಿಸಿದ್ದ ವೈರ್ಗಳನ್ನು ಕತ್ತರಿಸಿ ಎಟಿಎಂ ಯಂತ್ರವನ್ನೇ ಎತ್ತಿಕೊಂಡು ಪರಾರಿಯಾಗಿದ್ದಾರೆ.
ಮೂಲಗಳ ಪ್ರಕಾರ ಚಾಲಾಕಿ ಕಳ್ಳರು ಗೂಡ್ಸ್ ವಾಹನದಲ್ಲಿ ಬಂದು 3.16 ಲಕ್ಷ ರೂ. ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದಿದ್ದಾರೆ. ಎಟಿಎಂ ಕೇಂದ್ರದಲ್ಲಿ ಸೆಕ್ಯುರಿಟಿ ಗಾರ್ಡ್ ನಿಯೋಜಿಸಲಾಗಿತ್ತು. ಅವರು ಎಟಿಎಂ ಕೇಂದ್ರ ಕಟ್ಟಡದ ಸೆಲ್ಲಾರ್ನಲ್ಲಿ ಮಲಗಿದ್ದ ಕಾರಣ ಮಿಷನ್ ಕಳ್ಳತನವಾಗಿರುವುದು ಅವರ ಗಮನಕ್ಕೆ ಬಂದಿಲ್ಲ. ಮುಂಜಾನೆ ಎದ್ದು ನೋಡಿದಾಗ ಎಟಿಎಂ ಮಿಷನ್ ನಾಪತ್ತೆಯಾಗಿರುವುದನ್ನು ಕಂಡು ಗಾಬರಿಯಾಗಿ ಬರೋಡ ಬ್ಯಾಂಕಿನ ಮ್ಯಾನೇಜರ್ಗೆ ವಿಷಯ ತಿಳಿಸಿದ್ದಾರೆ. ಮ್ಯಾನೇಜರ್ ಅವರು ಸ್ಥಳಕ್ಕಾಗಮಿಸಿ ನೋಡಿ ನಂತರ ಬೆಳ್ಳಂದೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಎರಡು ತಂಡ ರಚನೆ:
ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣದ ಸಮೇತ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಕಳ್ಳರ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ. ಆರೋಪಿಗಳ ಸುಳಿವಿದ್ದು, ಆದಷ್ಟು ಬೇಗ ಎಟಿಎಂ ಮಿಷನ್ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


