ಹಾಸನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕರ ಬಂಧನ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಕಾಮುಕರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಕಾಮುಕರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಲವು ತಿಂಗಳ ನಂತರ, ಅದೂ ಬಾಲಕಿ ಗರ್ಭಿಣಿಯಾದ ನಂತರ ಘಟನೆ ಬೆಳಕಿಗೆ ಬಂದಿರುವುದು ದುರದೃಷ್ಟಕರ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಗರ್ಭಿಣಿಯಾದ ನಂತರ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಕುಟುಂಬ ಕೆಲಸ ಮಾಡುತ್ತಿದ್ದ ಕಾಫಿ ಎಸ್ಟೇಟ್ ಮಾಲೀಕ ಸೇರಿದಂತೆ ಮೂವರು ಆಕೆಯ ಪೋಷಕರು ಹೊರಗೆ ಹೋದಾಗ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಹೇಳಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸರು ಅದೇ ಗ್ರಾಮದ ಸ್ವಾಗತ್, ಸುದರ್ಶನ್ ಹಾಗೂ ಪಾಪಣ್ಣ ಎಂಬುವರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಬಾಲಕಿ ತನ್ನ ಪೋಷಕರಿಗೆ ಹೆದರಿ ವಿಷಯವನ್ನು ಬಹಿರಂಗಪಡಿಸಿಲ್ಲ. ಅಲ್ಲದೆ ದುಷ್ಕರ್ಮಿಗಳು ಸಂತ್ರಸ್ತೆ ಬಾಲಕಿಗೆ ಈ ವಿಷಯ ಬಹಿರಂಗಪಡಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಬಾಲಕಿ ಕಳೆದೆರಡು ವರ್ಷಗಳ ಹಿಂದೆ ಬೇರೆ ಜಿಲ್ಲೆಯಿಂದ ಉದ್ಯೋಗ ಅರಸಿ ವಲಸೆ ಬಂದಿದ್ದ ಕೂಲಿ ಕಾರ್ಮಿಕರ ಕುಟುಂಬದ ಹುಡುಗಿ. ತನ್ನ ದೇಹದಲ್ಲಿ ತೀವ್ರ ಬದಲಾವಣೆಯಾದ ನಂತರ ಘಟನೆಯ ಬಗ್ಗೆ ಬಾಲಕಿ ಪೋಷಕರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ. ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿರುವ ಬಾಲಕಿಗೆ ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಎಸ್ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


